ಜುಲೈ 28ಕ್ಕೆ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ; ದೊಡ್ಡಬಳ್ಳಾಪುರದಲ್ಲಿ ಸಾಧನಾ ಸಮಾವೇಶ
ಬೆಂಗಳೂರು; ಜುಲೈ 28ಕ್ಕೆ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಅಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾರಂಭಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಆದ ಹಿನ್ನೆಲೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಸಾಧನಾ ಸಮಾವೇಶ ನಡೆಸಲಾಗುತ್ತದೆ. ಈ ಸಮಾವೇಶನದಲ್ಲಿ ಸಿಎಂ ಬೊಮ್ಮಾಯಿ ಹೊಸ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಒಂದು ವರ್ಷದ ಅವಧಿಯಲ್ಲಿ ಆದ ಅಭಿವೃದ್ಧಿ ಕೆಲಸಗಳನ್ನೊಳಗೊಂಡ ಸಾಧನಾ ಪುಸ್ತಕವನ್ನು ಬಿಡುಗಡೆ ಮಾಡಲಾಗುತ್ತದೆ.
ಸಿಎಂ ಬೊಮ್ಮಾಯಿಯವರು ಜುಲೈ 24ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಜುಲೈ 25ರಂದು ಸಿಎಂ ಬೊಮ್ಮಾಯಿಯವರು ಅಮಿತ್ ಷಾರನ್ನು ಭೇಟಿಯಾಗಲಿದ್ದು, ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದಾರೆ.