BengaluruPolitics

ರಾಹುಲ್‌ ವಿಚಾರಣೆಯ ವಿಡಿಯೋ ಬಿಡುಗಡೆ ಮಾಡಿ ನೋಡೋಣ; ಡಿ.ಕೆ.ಶಿವಕುಮಾರ್‌ ಸವಾಲು

ಬೆಂಗಳೂರು; ನಮ್ಮ ನಾಯಕರ ಮೇಲೆ ಸುಳ್ಳು ಕೇಸ್‌ ಹಾಕಿ ವಿಚಾರಣೆ ನಡೆಸಲಾಗುತ್ತಿದೆ. ರಾಹುಲ್‌ ಗಾಂಧಿಯವರನ್ನು 50 ಗಂಟೆಗಳ ಕಾಲ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆ ವಿಚಾರಣೆಯ ವಿಡಿಯೋವನ್ನು ಬಿಡುಗಡೆ ಮಾಡಲಿ ನೋಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ. ಬೆಂಗಳೂರಿನ ಅವರ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ದ್ವೇಷದ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದರು.

ವಿನಾ ಕಾರಣ ನಮ್ಮ ನಾಯಕರ ಮೇಲೆ ಕೇಸ್‌ ದಾಖಲಿಸಲಾಗಿದೆ. ಸುಮ್ಮನೆ ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದೆ. ಹೀಗಾಗಿ ನಾನು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ತಿಳಿಸಿದರು.

Share Post