CrimePolitics

ಇಡಿ ಕಚೇರಿ ಪ್ರವೇಶಿಸಿದ ಸೋನಿಯಾ ಗಾಂಧಿ; ಮಹಿಳಾ ಅಧಿಕಾರಿ ನೇತೃತ್ವದಲ್ಲಿ ವಿಚಾರಣೆ

ನವದೆಹಲಿ;  ನ್ಯಾಷನಲ್‌ ಹೆರಾಲ್ಡ್‌ ಕೇಸ್‌ ಸಂಬಂಧ ವಿಚಾರಣೆ ಎದುರಿಸಲು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ ಇಡಿ ಕಚೇರಿಗೆ ಆಗಮಿಸಿದ್ದಾರೆ. ಮಹಿಳಾ ಅಧಿಕಾರಿ ನೇತೃತ್ವದಲ್ಲಿ ಸೋನಿಯಾಗಾಂಧಿಯವರ ವಿಚಾರಣೆ ನಡೆಸಲಾಗುತ್ತಿದೆ. ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ಖರೀದಿ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಮೇಲಿದೆ.

ಈಗಾಗಲೇ ರಾಹುಲ್‌ ಗಾಂಧಿ ಐದು ದಿನಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಇದೀಗ ಸೋನಿಯಾಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿ ಇಡಿ ಕಚೇರಿ ಬಳಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ದೆಹಲಿಯ ಬೀದಿಗಳಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

Share Post