ಸೋನಿಯಾ ಗಾಂಧಿ ವಿಚಾರಣೆಗೆ ವಿರೋಧ; ಬೆಂಗಳೂರಲ್ಲಿ ಕಾರಿಗೆ ಬೆಂಕಿ
ಬೆಂಗಳೂರು; ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿಯವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕ್ರತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಇಡಿ ಕಚೇರಿ ಬಳಿ ಸೇರಿದ್ದ ಪ್ರತಿಭಟನಾಕಾರರು, ಅವರದೇ ಕಾರೊಂದಕ್ಕೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಅವರೇ ತಂದು ನಿಲ್ಲಿಸಿದ್ದ ಕಾರೊಂದಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.