Districts

ಇಂದು ಕೊನೆಯ ಆಷಾಢ ಶುಕ್ರವಾರ; ಚಾಮುಂಡಿಗೆ ಲಕ್ಷ್ಮೀ ಅಲಂಕಾರ

ಮೈಸೂರು; ಅಷಾಢ ಮಾಸದಲ್ಲಿ ಮೈಸೂರಿನ ಚಾಮುಂಡೇಶ್ವರಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತವೆ. ಅದರಲ್ಲೂ ಆಷಾಢ ಶುಕ್ರವಾರಗಳಲ್ಲಿ ಭಕ್ತರ ದಂಡೇ ಸೇರುತ್ತದೆ. ಇಂದು ಕೊನೆಯ ಆಷಾಢ ಶುಕ್ರವಾರ. ಈ ಹಿನ್ನೆಲೆಯಲ್ಲಿ ಚಾಮುಂಡಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ವಜ್ರಾಭರಣಗಳನ್ನು ತೊಡಿಸಿ, ಚಾಮುಂಡಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. 

ಆಷಾಧಮಾಸದಲ್ಲಿ ಶಕ್ತಿ ದೇವತೆ ಚಾಮುಂಡಿಯ ದರ್ಶನ ಪಡೆದರೆ ಇಷ್ಟಾರ್ಥ ನೆರವೇರಲಿದೆ ಎಂದು ಪುರಾಣ ಹೇಳುತ್ತದೆ. ಈ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶಕ್ತಿ ದೇವತೆ ದರ್ಶನಕ್ಕೆ ಭಕ್ತ ಸಾಗರವೆ ಹರಿದು ಬಂದಿತ್ತು. ಕೊನೆಯ ಆಷಾಡ ಶುಕ್ರವಾರದ ಹಿನ್ನೆಲೆ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಇಂದು ಮುಂಜಾನೆ 3 ಗಂಟೆ 30 ನಿಮಿಷಕ್ಕೆ ಅಭಿಷೇಕದೊಂದಿಗೆ ಪೂಜಾ ಕೈಂಕರ್ಯ ಆರಂಭಿಸಲಾಯಿತು. ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ವಿವಿಧ ವಜ್ರಾಭರಣಗಳಿಂದ ಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕಾರ್ಯದ ನಂತರ 5 ಗಂಟೆ 30 ನಿಮಿಷಕ್ಕೆ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಕಣ್ಮನ ಸೆಳೆಯುವಂತೆ ವಿವಿಧ ರೀತಿಯ ಪುಪ್ಪಗಳಿಂದ ದೇವಾಲಯದ ಪ್ರಾಂಗಣವನ್ನು ಅತ್ಯಾಕರ್ಷಕವಾಗಿ ಅಲಂಕರಿಸಲಾಗಿತ್ತು.

 

Share Post