ದೇವಿಪ್ರಸಾದ ತೀರ್ಥ ಸ್ವಾಮೀಜಿ ಅನುಮಾನಾಸ್ಪದ ಸಾವು
ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಸಮೀಪದ ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ (51) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹ ಅವರು ವಾಸವಿದ್ದ ಧರ್ಮ ಚಾವಡಿಯ ಕಟ್ಟಡದಲ್ಲಿ ಪತ್ತೆಯಾಗಿದೆ. ಶ್ರೀಗಳ ಸಾವಿನ ಬಗ್ಗೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ. ಇದು ಕೊಲೆ ಇರಬಹುದು ಎಂದು ಶಂಕಿಸಲಾಗಿದೆ.
ಶ್ರೀಗಳು ಎಕರೆಗಟ್ಟಲೆ ಪ್ರದೇಶದಲ್ಲಿ ಧರ್ಮ ಚಾವಡಿ ಸಂಸ್ಥೆಯನ್ನು ಕಟ್ಟಿ, ಅಲ್ಲಿಯೇ ವಾಸ ಮಾಡುತ್ತಿದ್ದರು. ಸ್ವಾಮೀಜಿಯವರ ಪೂರ್ವಾಶ್ರಮದ ಪತ್ನಿ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ಪೂರ್ವಾಶ್ರಮದಲ್ಲಿ ದೇವಿಪ್ರಸಾದ್ ಶೆಟ್ಟಿ ಹೆಸರಿನಿಂದ ಗುರುತಿಸಲ್ಪಟ್ಟಿದ್ದು, ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಸಂಸಾರದಲ್ಲಿ ವಿರಸವಾಗಿ ಸನ್ಯಾಸ ಸ್ವೀಕರಿಸಿದ್ದರು. ಪತ್ನಿ ಹಾಗೂ ಅವರ ತಾಯಿ ಧರ್ಮ ಚಾವಡಿ ಅಣತಿ ದೂರದಲ್ಲಿರುವ ಪೂರ್ವಾಶ್ರಮದ ಮನೆಯಲ್ಲಿ ವಾಸವಿದ್ದರು. ಮಗಳು ವಿದೇಶದಲ್ಲಿದ್ದಾರೆ. ಧರ್ಮ ಚಾವಡಿ ಪ್ರದೇಶದಲ್ಲಿ ಕೋಟಿಗಟ್ಟಲೆ ಬೆಲೆಯ ಸಂಪತ್ತೂ ಇದೆ.