CrimeDistricts

ಡಕಾಯಿತಿ, ದರೋಡೆ ಪ್ರಕರಣ; ಸಿನಿಮೀಯ ರೀತಿಯಲ್ಲಿ ಆರೋಪಿಗಳ ಅರೆಸ್ಟ್

ಗಂಗಾವತಿ; ದರೋಡೆ, ಡಕಾಯಿತಿ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಚೇಸ್‌ ಮಾಡಿ ಬಂಧಿಸಲಾಗಿದೆ. ಗಂಗಾವತಿ ತಾಲ್ಲೂಕಿನ ಮುಸ್ಟೂರು ಗ್ರಾಮದ ಬಳಿ ಪರಾರರಿಯಾಗುತ್ತಿದ್ದ ಡಾಕಾಯಿತರನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

  ಆರೋಪಿಗಳು ಖಾಸಗಿ ವಾಹನದಲ್ಲಿ ಪರಾರಿಯಾಗುತ್ತಿರುವಾಗ ಬೆಂಗಳೂರಿನ ಚಿಕ್ಕಜಾಲ ಠಾಣೆ ಪೊಲೀಸರು ಬೆನ್ನತ್ತಿದ್ದಾರೆ. ಆರೋಪಿಗಳು ಮುಸ್ಟೂರು ಬಳಿ ಇರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿಗೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಡಕಾಯಿತರು ಪರಾರಿಗೆ ಯತ್ನಿಸಿದ್ದಲ್ಲದೇ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದರು.

ಈ ಸಂದರ್ಭದಲ್ಲಿ ಪೊಲೀಸರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಪ್ರಕರಣದಲ್ಲಿ ಐವರು ಆರೋಪಿಗಳಲ್ಲಿ ಅಂಬಣ್ಣ, ಪರಶುರಾಮ, ಅಡವಿಯಪ್ಪ ಎಂಬುವರನ್ನು ಬಂಧಿಸಿದ್ದಾರೆ. ಇನ್ನುಳಿದ ಶಂಕರ್ ಹಾಗೂ ಅಶೋಕ್ ಎಂಬುವರ ಕಾಲಿಗೆ ಗುಂಡೇಟು ತಗುಲಿದ್ದು, ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Post