National

ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿಚಾರ; ಸುಪ್ರೀಂ ಕೋರ್ಟ್‌ ಹೇಳಿದ್ದೇನು..?

ನವದೆಹಲಿ; ಮೇಕೆದಾಟು ವಿಚಾರವಾಗಿ ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಮುಂದಿನ ವಿಚಾರಣೆವರೆಗೂ ಕಾವೇರಿ ಪ್ರಾಧಿಕಾರದಲ್ಲಿ ಚರ್ಚೆ ನಡೆಸದಂತೆ ಸೂಚನೆ ನೀಡಿದೆ. ವಿಚಾರಣೆಯನ್ನು ಆಗಸ್ಟ್‌ 10ಕ್ಕೆ ಮುಂದೂಡಿದೆ.

ಮೇಕೆದಾಟು ಯೋಜನೆಯ ಡಿಪಿಆರ್‌ ಬಗ್ಗೆ ಕಾವೇರಿ ಪ್ರಾಧಿಕಾರದಲ್ಲಿ ಚರ್ಚೆಗೆ ತೀರ್ಮಾನಿಸಲಾಗಿತ್ತು. ಆದ್ರೆ ಇದಕ್ಕೆ ಅವಕಾಶ ನೀಡದಂತೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆಹೋಗಿತ್ತು. ಇದರ ವಿಚಾರಣೆ ನಡೆಸಿದ ಕೋರ್ಟ್‌, ಎರಡೂ ರಾಜ್ಯಗಳಿಗೆ ನೋಟಿಸ್‌ ಜಾರಿ ಮಾಡಿದ್ದು, ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಜೊತೆಗೆ ಆಗಸ್ಟ್‌ 10ರವರೆಗೂ ಮೇಕೆದಾಟು ಡಿಪಿಆರ್‌ ಬಗ್ಗೆ ಚರ್ಚೆ ನಡೆಸದಂತೆ ಸೂಚನೆ ನೀಡಿದೆ.

Share Post