CrimeNational

ಸೋನಿಯಾ ಗಾಂಧಿ ವಿಚಾರಣೆಗೆ ವಿರೋಧ; ರಸ್ತೆಯಲ್ಲೇ ಧರಣಿ ಕುಳಿತ ರಾಹುಲ್‌ ಗಾಂಧಿ

ನವದೆಹಲಿ; ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಸಂಸದರು ಪ್ರತಿಭಟನೆ ನಡೆಸಿದರು. ಸಂಸತ್‌ ಭವನದಿಂದ ವಿಜಯ್‌ ಚೌಕ್‌ವರೆಗೆ ಮೆರವಣಿಗೆ ನಡೆಸಲಾಯಿತು. ಇದರಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡಾ ಪಾಲ್ಗೊಂಡಿದ್ದರು.

ಮೆರವಣಿಗೆ ವಿಜಯ್‌ ಚೌಕ್‌ಗೆ ಬರುತ್ತಿದ್ದಂತೆ ರಾಹುಲ್‌ ಗಾಂಧಿಯವರು ರಸ್ತೆ ಮಧ್ಯದಲ್ಲೇ ಧರಣಿ ಕುಳಿತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಈ ವೇಳೆ ಪೊಲೀಸರು ಹಲವು ಸಂಸದರನ್ನು ವಶಕ್ಕೆ ತೆಗೆದುಕೊಂಡು, ಬಸ್ಸೊಂದರಲ್ಲಿ ಬೇರೆಡೆಗೆ ಸ್ಥಳಾಂತರ ಮಾಡಿದರು.

Share Post