National

ಮತ್ತೆ ಇಡಿ ವಿಚಾರಣೆಗೆ ಸೋನಿಯಾ ಹಾಜರು; ಇದುವರೆಗೆ 6 ಗಂಟೆ ವಿಚಾರಣೆ

ನವದೆಹಲಿ; ಇಂದು ಮೂರು ಗಂಟೆಗಳ ಕಾಲ ವಿಚಾರಣೆ ಎದುರಿಸಿ, ಊಟಕ್ಕೆ ತೆರಳಿದ್ದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತೆ ವಿಚಾರಣೆ ಹಾಜರಾಗಿದ್ದಾರೆ. ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅವರು ಇದುವರೆಗೆ ಆರು ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಇನ್ನೂ ವಿಚಾರಣೆ ಮುಂದುವರೆದಿದೆ.

ಮೊದಲಿಗೆ ಸೋನಿಯಾ ಅವರು ಜೂನ್‌ 21 ರಂದು ಮೂರು ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ಅನಂತರ ಇಂದು ಅವರು ಎರಡನೇ ಬಾರಿ ಇಡಿ ಮುಂದೆ ಹಾಜರಾಗಿದ್ದರು. ಬೆಳಗ್ಗೆ ಮೂರು ಗಂಟೆಗಳ ಕಾಲ ಅವರನ್ನು ವಿಚಾರಣೆ ಮಾಡಲಾಗಿದೆ. ಇಂದು ರಾತ್ರಿಯವರೆಗೆ ವಿಚಾರಣೆ ನಡೆಯುವ ಸಾಧ್ಯತೆ ಇದೆ.

Share Post