ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಸುಳ್ಯ, ಕಡಬದಲ್ಲಿ ಬಿಗುವಿನ ಪರಿಸ್ಥಿತಿ
ಸುಳ್ಯ(ದಕ್ಷಿಣ ಕನ್ನಡ); ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ಜಿಲ್ಲೆಯ ಸುಳ್ಳ, ಕಡಬ ಹಾಗು ಪುತ್ತೂರು ತಾಲುಕುಗಳಲ್ಲಿ ಬಿಗುವಿನ ಪರಿಸ್ಥಿತಿ ಏರ್ಪಟ್ಟಿದೆ. ಪುತ್ತೂರಿನಲ್ಲಿ ಕೆಲವರು ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬಸ್ ಸೌಕರ್ಯ ಇಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಕಚೇರಿಗಳಿಗೆ ತೆರಳುವವರು ಸಮಸ್ಯೆ ಎದುರಿಸಿದರು. ಪುತ್ತೂರಿನ ವಿವೇಕಾನಂದ ಕಾಲೇಜು ಸೇರಿದಂತೆ ಕೆಲವು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಬಸ್ ಸಂಚಾರ ಸ್ಥಗುತಗೊಂಡಿದ್ದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು.
ಪ್ರವೀಣ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರಿನ ಪ್ರಗತಿ ಆಸ್ಪತ್ರೆಯಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬೆಳಗ್ಗೆ ಪುತ್ತೂರು ನಗರದಿಂದ ಪಾರ್ಥಿವ ಶರೀರದ ಮೆರವಣಿಗೆ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ ಕೊಂಡೊಯ್ಯಲು ಹಿಂದೂ ಸಂಘಟನೆಗಳು ಹಾಗೂ ಕುಟುಂಬಸ್ಥರು ನಿರ್ಧರಿಸಿದ್ದಾರೆ.