CrimeDistricts

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ; ನಾಲ್ಕು ಪೊಲೀಸ್‌ ತಂಡಗಳ ರಚನೆ

ಮಂಗಳೂರು; ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಸಲು ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ದಕ್ಷಿಣ ಕನ್ನದ ಜಿಲ್ಲೆ ಎಸ್‌ಪಿ ರಿಷಿಕೇಶ್‌ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ. ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ತೀವ್ರ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಘಟನೆ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಅದಕ್ಕಾಗಿ ಪೊಲೀಸರ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದ್ದು, ಆದಷ್ಟು ಬೇಗ ತನಿಖೆ ಮಾಡಿ, ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಅವರು ಹೇಳಿದರು.

 

Share Post