BengaluruCrime

ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌; ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡನೆ

ಬೆಂಗಳೂರು; ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಿಂದೂ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಬೇಕು. ಪ್ರವೀಣ್‌ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.

ಯಾವುದೇ ಕಾರಣಕ್ಕಾಗಿ ಧರ್ಮದ ಆಧಾರದಲ್ಲಿ ಯಾವುದೇ ದುಷ್ಕೃತ್ಯಗಳನ್ನು ನಡೆಸಬಾರದು. ಶಾಂತಿ ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ತಪ್ಪಿತಸ್ಥರು ಯಾರೇ ಆಗಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದ್ದಾರೆ.

Share Post