ಪತಿಯನ್ನು ಕೊಂದವರಿಗೆ ಕಠಿಣ ಶಿಕ್ಷೆಯಾಗಬೇಕು; ಪ್ರವೀಣ್ ಪತ್ನಿ ನೂತನಾ
ನೆಟ್ಟಾರು; ಪ್ರವೀಣ್ ನೆಟ್ಟಾರು ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಪ್ರವೀಣ್ ಅವರ ಪತ್ನಿ ನೂತನಾ, ಕೊಲೆಗಾರರನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ. ನನ್ನ ಗಂಡ ಸಮಾಜಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಆದ್ರೆ ಅವರನ್ನು ಯಾರೂ ವಾಪಸ್ ತಂದುಕೊಡುವುದಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.
ನನ್ನ ಗಂಡನಿಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು. ಆ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ಪ್ರವೀಣ್ ಪತ್ನಿ ನೂತನಾ ಆಗ್ರಹಿಸಿದ್ದಾರೆ.