ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಸಿಎಂ
ಬೆಂಗಳೂರು; ಬೆಳ್ಳಾರೆಯಲ್ಲಿ ನಡೆದ ಹಿಂದೂ ಮುಖಂಡ ಪ್ರವೀಣ್ ಕೊಲೆ ಪ್ರಕರಣ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಪ್ರವೀಣ್ ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದಾರೆ. ಈ ಹಿನ್ನೆಲೆ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದರ ಬಗ್ಗೆ ಸಿಎಂ ಬೊಮ್ಮಾಯಿವರು ಡಿಜಿ & ಐಜಿಪಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಪ್ರವೀಣ್ ಸೂದ್ ಅವರನ್ನು ಕರೆಸಿಕೊಂಡಿದ್ದ ಸಿಎಂ ಬೊಮ್ಮಾಯಿ ಅರ್ಧ ಗಂಟೆಗೂ ಹೆಚ್ಚು ಕಾಲ ಅವರೊಂದಿಗೆ ಮಾತುಕತೆ ನಡೆಸಿದರು. ಪ್ರವೀನ್ ನೆಟ್ಟಾರು ಅಂತಿಯಾತ್ರೆಗೆ ಏನೆಲ್ಲಾ ಸಿದ್ಧತೆ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು. ಇನ್ನು ಈ ಹತ್ಯೆಗೂ ಕೇರಳಕ್ಕೂ ನಂಟಿದೆ. ಈ ಹಿನ್ನೆಲೆಯಲ್ಲಿ ಕೆರಳ ಡಿಜಿಪಿ ಜೊತೆ ಮಾತನಾಡುವಂತೆ ಕರ್ನಾಟಕದ ಡಿಜಿಪಿಗೆ ಸೂಚನೆ ನೀಡುರುವುದಾಗಿ ಸಿಎಂ ಹೇಳಿದ್ದಾರೆ.