National

ವಾರದೊಳಗೆ ಬಿಬಿಎಂಪಿ ಮೀಸಲಾತಿ ಪ್ರಕಟಿಸಿ; ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ; ಒಂದು ವಾರದೊಳಗೆ ಬಿಬಿಎಂಪಿ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ಮೀಸಲಾತಿ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದೂ ಸುಪ್ರೀಂ ಕೋರ್ಟ್‌ ಹೇಳಿದೆ.

ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ ವಿಚಾರಣೆ ನಡೆಸಿದ ನ್ಯಾ.ಎ.ಎಂ ಖಾನಿಲ್ಕರ್ ಪೀಠ, ೮ ವಾರದಲ್ಲಿ ಚುನಾವಣೆ ನಡೆಸುವಂತೆ ಸೂಚನೆ ನೀಡಲಾಗಿತ್ತು . ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು ಮೀಸಲಾತಿ ಸಂಬಂಧ ರಚಿಸಲಾಗಿದ್ದ ಭಕ್ತವತ್ಸಲ ಸಮಿತಿ ವರದಿಯನ್ನು ವಿಳಂಬವಾಗಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೀಸಲಾತಿ ಪ್ರಕಟಿಸಲು ಸಾಧ್ಯವಾಗಿಲ್ಲ ಎಂದರು.

ವಾದ ಆಲಿಸಿದ ಪೀಠ ವರದಿ ಆಧರಿಸಿ ಇಂದಿನಿಂದ ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು ಎಂದು ಆದೇಶ‌ ನೀಡಿತು. ಸರ್ಕಾರ ಮೀಸಲಾತಿ ಪ್ರಕಟಿಸಿದ ಬಳಿಕ ಚುನಾವಣಾ ಆಯೋಗ ಚುನಾವಣಾ ನಡೆಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಿತು. ಸುಪ್ರೀಂಕೋರ್ಟ್ ಆದೇಶದಿಂದ ವರ್ಷಗಳಿಂದ ಬಾಕಿ ಉಳಿದಿದ್ದ ಬಿಬಿಎಂಪಿ ಚುನಾವಣೆ ಸನ್ನಿಹಿತವಾಗಿದ್ದು ಅಗಸ್ಟ್ ಎರಡನೇ ವಾರದಲ್ಲಿ ಬಿಬಿಎಂಪಿಗೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿದೆ.

 

Share Post