Districts

ಶೀಘ್ರದಲ್ಲೇ ಎಲ್ಲಾ ಆರೋಪಿಗಳ ಬಂಧನ – ಮಂಗಳೂರಿನಲ್ಲಿ ಸಿಎಂ ಬೊಮ್ಮಾಯಿ

ಮಂಗಳೂರು; ಪ್ರವೀಣ್‌ ಕೊಲೆ ಪ್ರಕರನ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರೊಂದಿಗೆ ನಿರಂತ ಸಂಪರ್ಕದಲ್ಲಿದ್ದು ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್‌ ಮನೆಗೆ ಭೇಟಿ ನೀಡಲು ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಪ್ರಕರಣ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ವಿಚಾರಣೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಿದ್ದೇವೆ. ಆದಷ್ಟು ಬೇಗ ಎಲ್ಲಾ ಆರೋಪಿಗಳನ್ನೂ ಬಂಧಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಪ್ರವೀಣ್‌ ಕುಟುಂಬಸ್ಥರ ಬಳಿಕ ಪರಿಹಾರ ಘೋಷಣೆ ಮಾಡಲಾಗುತ್ತದೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

Share Post