CrimeDistricts

ಸರಣಿ ಕೊಲೆ ಹಿನ್ನೆಲೆ; ಸಂಜೆ 6ರ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲವೂ ಬಂದ್‌

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ಸಂಜೆ 6 ಗಂಟೆಯಿಂದ ಬೆಳಗ್ಗೆ 6ಗಂಟೆಯವರೆಗೆ ಅಂಗಡಿಗಳನ್ನು ಬಂದ್‌ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ಕಿಶೋರ್‌ ಕುಮಾರ್‌ ಆದೇಶ ಮಾಡಿದ್ದಾರೆ.

ಇಂದು ಸಂಜೆ 6 ಗಂಟೆಯಿಂದ ಆಗಸ್ಟ್‌ 1 ರ ಬೆಳಗ್ಗೆಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಬಹುದು. ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಎಲ್ಲಾ ವ್ಯಾಪಾರ ವ್ಯವಹಾರಗಳು ಬಂದ್‌ ಆಗಲಿವೆ.

ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೇವಲ ಆಸ್ಪತ್ರೆ, ಕ್ಲಿನಿಕ್‌, ಮೆಡಿಕಲ್‌ ನಂತಹ ತುರ್ತು ಸೇವೆಗಳು ಮಾತ್ರ ಸಂಜೆ 6 ರ ನಂತರವೂ ಕೆಲಸ ಮಾಡಲಿವೆ.

 

Share Post