ಬೆಂಗಳೂರಿಗೂ ಕಾಲಿಡ್ತಾ ಮಂಕಿಪಾಕ್ಸ್..?
ಬೆಂಗಳೂರು; ಮಂಕಿ ಪಾಕ್ಸ್ ಬೆಂಗಳೂರಿಗೂ ಕಾಲಿಡ್ತಾ ಅನ್ನೋದು ಭೀತಿ ಎದುರಾಗಿದೆ. ಯಾಕಂದ್ರೆ, ಬೆಂಗಳೂರಲ್ಲಿ ಮಂಕಿಪಾಕ್ಸ್ ಗುಣಲಕ್ಷಣ ಇರುವ ವ್ಯಕ್ತಿ ಪತ್ತೆಯಾಗಿದ್ದಾನೆ. ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಹೋಲುವ ಸೋಂಕು ಕಂಡುಬಂದಿದೆ. ಆತ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ 4ರಂದು ಆಫ್ರಿಕಾ ಖಂಡದ ಇಥಿಯೋಪಿಯಾದಿಂದ ಬೆಂಗಳೂರಿಗೆ ಈ ರೋಗಿ ಬಂದಿದ್ದಾನೆ. ಖಾಸಗಿ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಮಾಡಿಸಿಕೊಳ್ಳಲು ಆಗಮಿಸಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವ್ಯಕ್ತಿಯ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡು ಬಂದಿದೆ. ಇದರ ಸ್ಯಾಂಪಲ್ ಅನ್ನು ಪುಣೆಯ ಎನ್.ಐ.ವಿಗೆ ಕಳುಹಿಸಲಾಗಿದೆ.