Sports

ಕಾಮನ್ವೆಲ್ತ್ ಗೇಮ್ಸ್ 2022: ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ ಪೂಜಾರಿ

ಬರ್ಮಿಂಗ್ಹ್ಯಾಮ್; ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು 61 ಕೆಜಿ ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ.

ಪುರುಷರ 61 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 269 ಕೆಜಿ ಭಾರ ಎತ್ತುವ ಮೂಲಕ ಮೂಲಕ ಮತ್ತೊಮ್ಮೆ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಗುರುರಾಜ್ ಈ ಮೊದಲು 2018ರಲ್ಲಿ ನಡೆದ ಗೋಲ್ಡ್‌ಕೋಸ್ಟ್‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದರು.

Share Post