ಜಬಲ್ಪುರ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಎಂಟು ಮಂದಿ ಸಜೀವದಹನ
ಭೋಪಾಲ್; ಮಧ್ಯಪ್ರದೇಶದ ಜಬಲ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇದುವರೆಗೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶಿವನಗರದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.. ಈ ಘಟನೆ ಸ್ಥಳದಲ್ಲಿ ಕೋಲಾಹಲ ಸೃಷ್ಟಿಸಿದೆ. ಕೂಡಲೇ ಬೆಂಕಿ ಆಸ್ಪತ್ರೆಯಾದ್ಯಂತ ವ್ಯಾಪಿಸಿತು. ಮೇಲಿನ ಮಹಡಿಯಲ್ಲಿದ್ದವರು ಕಿಟಕಿಯಿಂದ ಹಾರಿ ಪ್ರಾಣ ಉಳಿಸಿಕೊಂಡರು. ಮಾಹಿತಿ ಪಡೆದ ರಕ್ಷಣಾ ತಂಡ ಹಾಗೂ ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಘಟನೆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ.
ಆದರೆ, ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಈ ವೇಳೆ ಎಷ್ಟು ಮಂದಿ ಇದ್ದರು ಎಂಬುದು ಸ್ಪಷ್ಟವಾಗಿಲ್ಲ. ಇದುವರೆಗೆ ಏಳು ಮಂದಿ ಸಾವನ್ನಪ್ಪಿದ್ದು, ಇನ್ನು ಕೆಲವರು ಬೆಂಕಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಆಸ್ಪತ್ರೆಯಲ್ಲಿದ್ದವರೆಲ್ಲರೂ ಬೆಂಕಿ ಹೊತ್ತಿಕೊಂಡಿದ್ದು, ಚೀರುತ್ತಾ ಹೊರಗೆ ಓಡಿ ಬಂದಿದ್ದಾರೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಬೆಂಕಿ ವ್ಯಾಪಿಸಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ತಿಳಿಯಬೇಕಿದೆ.