ಅಕ್ರಮ ಹಣ ವರ್ಗಾವಣೆ ಪ್ರಕರಣ; ನ್ಯಾಷನಲ್ ಹೆರಾಲ್ಡ್ ಕಚೇರಿ ಮೇಲೆ ಇಡಿ ದಾಳಿ
ನವದೆಹಲಿ; ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ. ಇತ್ತೀಚೆಗಷ್ಟೇ ರಾಹುಲ್ ಗಾಂಧಿ ಹಾಗೂ ಸೋನಿಯಾಗಾಂಧಿಯವರನ್ನು ತೀವ್ರ ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು, ಈಗ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಇಡಿ ಅಧಿಕಾರಿಗಳು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಇಂದು ಬೆಳಗ್ಗೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ರಾಹುಲ್ ಗಾಂಧಿಯವರನ್ನು ಐದು ದಿನ ಹಾಗೂ ಸೋನಿಯಾಗಾಂಧಿಯವರನ್ನು ಮೂರು ದಿನಗಳ ಕಾಲ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಅವರಿಂದ ಒಂದಷ್ಟು ದಾಖಲೆಗಳನ್ನೂ ಪಡೆದುಕೊಂಡಿದ್ದರು. ಇದೀಗ ಅಧಿಕಾರಿಗಳು ನ್ಯಾಷನಲ್ ಹೆರಾಲ್ಡ್ ಕಚೇರಿಯಲ್ಲಿ ಶೋಧ ನಡೆಸಿದ್ದಾರೆ.