ಡಿ.ಕೆ.ಶಿವಕುಮಾರ್ಗೆ ಬಿಗ್ ರಿಲೀಫ್; ಜಾಮೀನು ವಿಸ್ತರಿಸಿದ ಇಡಿ ಕೋರ್ಟ್
ನವದೆಹಲಿ; ಅಕ್ರಮ ಹಣ ವರ್ಗಾವಣೆ ಹಾಗೂ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಇತರ ಆರೋಪಿಗಳಿಗೆ ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ರೆಗ್ಯುಲರ್ ಬೇಲ್ ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಇತ್ತೀಚೆಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಮಧ್ಯಂತರ ಜಾಮೀನು ಪಡೆದಿದ್ದ ಡಿ.ಕೆ.ಶಿವಕುಮಾರ್ ಹಾಗೂ ಇತರ ಆರೋಪಿಗಳು ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದರಿಂದ ರೆಗ್ಯುಲರ್ ಬೇಲ್ ಪಡೆಯಬೇಕಿತ್ತು. ಇದಕ್ಕಾಗಿ ಅರ್ಜಿ ಸಲ್ಲಿಸಿಕೊಂಡಿದ್ದರು. ಆದ್ರೆ ಇಡಿ ಅಧಿಕಾರಿಗಳು ಜಾಮೀನು ನೀಡದಂತೆ ಮನವಿ ಮಾಡಿದ್ದರು. ಆದ್ರೆ ಆರೋಪಿಗಳ ಪರ ವಕೀಲದ ವಾದಕ್ಕೆ ಮನ್ನಣೆ ಕೊಟ್ಟ ಕೋರ್ಟ್, ಜಾಮೀನು ವಿಸ್ತರಣೆ ಮಾಡಿದೆ. ಆರೋಪಿಗಳಿಗೆ ಒಂದಷ್ಟು ಷರತ್ತುಗಳನ್ನು ವಿಧಿಸಿದೆ. ಆರೋಪಿಗಳು ಒಂದು ಲಕ್ಷ ರೂಪಾಯಿ ಶ್ಯೂರಿಟಿ ನೀಡಬೇಕು, ದೇಶ ಬಿಟ್ಟು ಹೋಗಬಾರದು ಹಾಗೂ ಸಾಕ್ಷ್ಯ ನಾಶಪಡಿಸಲು ಪ್ರಯತ್ನಿಸಬಾರದು ಎಂದು ಷರತ್ತು ವಿಧಿಸಿದೆ.