ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ; ಆಂಧ್ರ ಗಡಿಯಲ್ಲಿ ಬರ್ಬರ ಹತ್ಯೆ
ಚಿಕ್ಕಬಳ್ಳಾಪುರ; ಕರ್ನಾಟಕ-ಆಂಧ್ರಪ್ರದೇಶದ ಗಡಿಯಲ್ಲಿ ಬರ್ಬರ ಕೊಲೆಯೊಂದು ನಡೆದಿದೆ. ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಾಗೇಪಲ್ಲಿ ತಾಲ್ಲೂಕಿನ ಆದಿಗಾನಹಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.
ಆದಿಗಾನಹಳ್ಳಿ ಗ್ರಾಮದ ಶ್ರೀನಿವಾಸ್(38) ಕೊಲೆಯಾದ ವ್ಯಕ್ತಿ. ಶ್ರೀನಿವಾಸ್ ಬಾಗೇಪಲ್ಲಿ ಟೋಲ್ ಪ್ಲಾಜಾ ಬಳಿಯ ವೇಬ್ರಿಡ್ಜ್ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಶ್ರೀನಿವಾಸ್ ತಲೆಗೆ ಬಲವಾಗಿ ಹೊಡೆದಿದ್ದಾರೆ. ಈ ವೇಳೆ ಬೈಕ್ನಿಂದ ಕೆಳಗೆ ಬಿದ್ದ ಶ್ರೀನಿವಾಸ್ ನಡು ರಸ್ತೆಯಲ್ಲೇ ಮೃತಪಟ್ಟಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಹಾಗೂ ಚಿಕ್ಕಬಳ್ಳಾಪುರ ಡಿವೈಎಸ್ಪಿ ವಾಸುದೇವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.