ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಎನ್ಐಎ ಅಧಿಕಾರಿಗಳಿಂದ ತನಿಖೆ ಚುರುಕು
ಮಂಗಳೂರು; ಕಳೆದ ವಾರ ನಡೆದ ಹಿಂದೂ ಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ. ಕೊಲೆ ನಡೆದ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮಕ್ಕೆ ಎನ್ಐಎ ಅಧಿಕಾರಿಗಳು ಆಗಮಿಸಿದ್ದಾರೆ. ಕೊಲೆ ಸ್ಥಳ ಪರಿಶೀಲನೆ ನಡೆಸಿರುವ ಅವರು, ಸ್ಥಳೀಯರಿಂದ ಹಾಗೂ ಪೊಲೀಸರಿಂದ ಪ್ರಕರಣದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.
ಪ್ರವೀಣ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಆದ್ರೆ ಪ್ರಮುಖ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಹೀಗಿರುವಾಗಲೇ ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆಯ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ. ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕುನ ಅಂತ ಪ್ರವೀಣ್ ಕುಟುಂಬದವರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಎನ್ಐಎ ತನಿಖೆಗೆ ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಇಂದಿನಿಂದ ತನಿಖೆ ಆರಂಭಿಸಿದ್ದಾರೆ.