CrimeDistricts

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ; ತನಿಖೆ ಚುರುಕುಗೊಳಿಸಿದ NIA

ಮಂಗಳೂರು; ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಶುಕ್ರವಾರವೇ ಬೆಳ್ಳಾರೆ ಗ್ರಾಮಕ್ಕೆ ಆಗಮಿಸಿದ್ದ ಎನ್‌ಐಎ ತಂಡ ತೀವ್ರ ತನಿಖೆ ನಡೆಸಿತ್ತು. ಇದೀಗ ಎನ್‌ಐಎ ಅಧಿಕಾರಿಗಳು ಈ ಪ್ರಕರಣ ಸಂಬಂಧ ಅಧಿಕೃತವಾಗಿ ಎಫ್‌ಐಆರ್‌ ದಾಖಲು ಮಾಡಿಕೊಂಡಿದ್ದಾರೆ. ಈ ಮೂಲಕ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಮಂಗಳೂರು ಪೊಲೀಸರು ಈಗಾಗಲೇ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಆರು ಮಂದಿ ಸೇರಿ ನಾಪತ್ತೆಯಾದವರ ಮೇಲೂ ಎನ್‌ಐಎ ತಂಡ ಎಫ್‌ಐಆರ್‌ ದಾಖಲಿಸಿದೆ. ಜೊತೆಗೆ ಈ ಎಫ್‌ಐಆರ್‌ ಪ್ರತಿಯನ್ನು ಕೋರ್ಟ್‌ಗೆ ಸಲ್ಲಿಸಿದೆ. ಎನ್‌ಐಎನ ಒಂದು ತಂಡ ಸುಳ್ಯದಲ್ಲಿ ಬೀಡುಬಿಟ್ಟಿದೆ. ಸಂಬಂಧಪಟ್ಟವರ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.

 ನಾಪತ್ತೆಯಾಗಿರುವ ಆರೋಪಿಗಳಿಗೆ ಶೋಧ ಕಾರ್ಯ ಕೂಡಾ ಚುರುಕಿನಿಂದ ನಡೆಯುತ್ತಿದೆ. ಬೆಳ್ಳಾರೆ ಪೊಲೀಸರಿಂದ ಕೇಸ್ ಫೈಲ್ ಪಡೆದು ತನಿಖೆ ಆರಂಭಿಸಿರುವ ಎನ್‌ಐಎ ತಂಡ ಕುಟುಂಬದವರ ಹೇಳಿಕೆ, ದೂರುದಾರನ ಹೇಳಿಕೆಗಳು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಇದಕ್ಕೆ ಸ್ಥಳೀಯ ಪೊಲೀಸರು ಕೂಡಾ ಸಹಕಾರ ನೀಡುತ್ತಿದ್ದಾರೆ.
ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಬೆಳ್ಳಾರೆಯಲ್ಲಿ ಇಬ್ಬರು ಹಾಗೂ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದರು. ನಿನ್ನೆ ಸುಳ್ಯದ ನಾವೂರ್ ನಿವಾಸಿ ಅಬಿದ್ (22), ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಲ್(28) ಎಂಬುವವರನ್ನು ಬಂಧಿಸಲಾಗಿದೆ.
Share Post