CrimeDistricts

ಹುಟ್ಟುಹಬ್ಬದ ದಿನವೇ ನೇಣಿಗೆ ಶರಣಾದ 26 ವರ್ಷದ ಉಪನ್ಯಾಸಕಿ

ಚಾಮರಾಜನಗರ; ತಮ್ಮ ಹುಟ್ಟುಹಬ್ಬದ ದಿನವೇ ಉಪನ್ಯಾಸಕಿಯೊಬ್ಬರು ಇಹಲೋಕ ತ್ಯಜಿಸಿದ್ದಾರೆ.  ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ ಡೆತ್‍ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಂದನಾ ಅವರು ಜೆಎಸ್‍ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.  ಚಾಮರಾಜನಗರದ ಜೆಎಸ್‍ಎಸ್ ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಡೆತ್ ನೋಟ್‍ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post