75 ನೇ ಸ್ವಾತಂತ್ರೋತ್ಸವ ಹಿನ್ನೆಲೆ; ಆ.15ರಂದು ಬಿಎಂಟಿಸಿ ಪ್ರಯಾಣ ಉಚಿತ
ಬೆಂಗಳೂರು; 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ ಹದಿನೈದರಂದು ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಇಡೀ ದಿನ ಬೆಂಗಳೂರು ನಗರದಲ್ಲಿ ಎಲ್ಲಿಗೆ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಬಿಎಂಟಿಸಿ ತಿಳಿಸಿದೆ. ರಾಜ್ಯ ಸರ್ಕಾರ ಇದಕ್ಕೆ ಒಪ್ಪಿಗೆ ಕೊಟ್ಟ ಹಿನ್ನೆಲೆಯಲ್ಲಿ ಬಿಎಂಟಿಸಿ ಈ ಘೋಷಣೆ ಮಾಡಿದೆ.
ಆಗಸ್ಟ್ 15 ರಂದು ವೋಲ್ವೋ ಸೇರಿ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದು. ಇದರಿಂದಾಗಿ ಬಿಎಂಟಿಸಿಗೆ ಮೂರು ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ತಿಳಿದುಬಂದಿದೆ.