CrimeNational

ಕಾಂಗ್ರೆಸ್‌ ಶಾಸಕನ ಅಳಿಯನಿಂದ ಭೀಕರ ಅಪಘಾತ; 6 ಮಂದಿ ದುರ್ಮರಣ

ಗಾಂಧಿನಗರ; ಗುಜರಾತ್‌ನಲ್ಲಿ ಭೀಕರ ಸರಣಿ ಅಪಘಾತ ನಡೆದಿದ್ದು, ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಲ್ಲಿ ಆನಂದ್‌ನಗರದಲ್ಲಿ ಕಾಂಗ್ರೆಸ್‌ ಶಾಸಕನ ಅಳಿಯನ ಕಾರು ಬೈಕ್‌ ಹಾಗೂ ಆಟೋಗೆ ಡಿಕ್ಕಿ ಹೊಡೆದಿದ್ದು, ಈ ದುರಂತ ಸಂಭವಿಸಿದೆ,

ಕಾರ್, ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಶಾಸಕ ಪುನಂಭಾಯಿ ಮಾಧಭಾಯಿ ಪರ್ಮಾರ್ ಅವರ ಅಳಿಯ ಖೇತನ್ ಪಾಧಿಯಾರ್ ಸಂಚರಿಸುತ್ತಿದ್ದ ಎಸ್‌ಯುವಿ ಕಾರು ಈ ಅಪಘಾತಕ್ಕೆ ಕಾರಣವಾಗಿದೆ. ಈ ಕಾರು ಬೈಕ್‌ ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾದಲ್ಲಿದ್ದ ನಾಲ್ವರು ಮತ್ತು ಬೈಕ್‍ನಲ್ಲಿದ್ದ ಇಬ್ಬರು ಸೇರಿ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಖೇತನ್‍ನನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share Post