HealthNational

ಸೋನಿಯಾಗಾಂಧಿಗೆ ಮತ್ತೆ ಕೊರೊನಾ ಸೋಂಕು; ಮನೆಯಲ್ಲೇ ಐಸೋಲೇಷನ್‌

ನವದೆಹಲಿ; ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮತ್ತೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಜೂನ್‌ ಮೊದಲ ವಾರದಲ್ಲಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಅವರು ದೆಹಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇದೀಗ ಮತ್ತೆ ಅವರಿಗೆ ಕೊರೊನಾ ಪಾಸಿಟಿವ್‌ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಮನೆಯಲ್ಲೇ ಐಸೋಲೇಟ್‌ ಆಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಜಯರಾಮ್‌ ರಮೇಶ್‌ ಟ್ವೀಟ್‌ ಮಾಡಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿಗೆ ಸಮನ್ಸ್‌ ನೀಡಲಾಗಿತ್ತು. ಜೂನ್‌ ನಲ್ಲಿ ಮೊದಲ ಬಾರಿಗೆ ಸಮನ್ಸ್‌ ನೀಡಿದ ನಂತರ ಅವರಿಗೆ ಕೊರೊನಾ ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಗುಣಮುಖರಾದ ನಂತರ ಸೋನಿಯಾಗಾಂಧಿಯವರು ಮೂರು ದಿನಗಳ ಕಾಲ ವಿಚಾರಣೆ ಎದುರಿಸಿದ್ದರು. ಇದೀಗ ಅವರಿಗೆ ಮತ್ತೆ ಕೊರೊನಾ ದೃಢಪಟ್ಟಿದೆ.

Share Post