ಧ್ವಜ ಕಟ್ಟುವಾಗ ಜಾರಿಬಿದ್ದು ಸಾಫ್ಟ್ವೇರ್ ಎಂಜಿನಿಯರ್ ಸಾವು..!
ಬೆಂಗಳೂರು; ಮನೆಯ ಮೇಲೆ ರಾಷ್ಟ್ರಧ್ವಜ ಕಟ್ಟುವಾಗ ಜಾರಿಬಿದ್ದು ಸಾಫ್ಟ್ವೇರ್ ಎಂಜಿನಿಯರ್ ಒಬ್ಬರು ಸಾವನ್ನಪ್ಪಿದ್ದಾರೆ. ಹೆಚ್ಬಿಆರ್ ಲೇಔಟ್ನಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರನ್ನು ವಿಶುಕುಮಾರ್ ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ವಿಶುಕುಮಾರ್ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ನಿನ್ನೆ ಮಧ್ಯಾಹ್ನ ಅವರ ಮನೆಯ ಮೇಲೆ ತ್ರಿವರ್ಣ ಧ್ವಜ ಕಟ್ಟಲು ಹೋಗಿದ್ದರು. ಈ ವೇಳೆ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ಇದ್ರಿಂದ ಅವರ ತಲೆಗೆ ಗಂಭಿರವಾಗಿ ಪೆಟ್ಟಾಗಿತ್ತು.
ಕೂಡಲೇ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕಳೆದ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಹೆಂಡತಿ ಹಾಗೂ 2 ವರ್ಷದ ಮಗುವನ್ನು ಅಗಲಿದ್ದಾರೆ. ಮಗನ ಸಾವಿನ ಸಂಬಂಧ ವಿಶುಕುಮಾರ್ ತಂದೆ ನಾರಾಯಣ ಭಟ್ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.