NewsPolitics

ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಪುನಾರಚನೆ; ಯಡಿಯೂರಪ್ಪಗೆ ಸದಸ್ಯತ್ವ

ನವದೆಹಲಿ; ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಪುನರ್‌ ರಚನೆ ಮಾಡಲಾಗಿದ್ದು, ಇದರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸದಸ್ಯತ್ವ ನೀಡಲಾಗಿದೆ. ಇದರ ಜೊತೆಗೆ ಕೇಂದ್ರ ಚುನಾವಣಾ ಸಮಿತಿಯಲ್ಲೂ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಲಾಗಿದೆ.

ಹನ್ನೊಂದು ಸದಸ್ಯರ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹಾಗೂ ನಿತಿನ್‌ ಗಡ್ಕರಿ ಅವರ ಹೆಸರನ್ನು ಕೈಬಿಡಲಾಗಿದೆ. ಕರ್ನಾಟಕದಿಂದ ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರಿಗೆ ಸ್ಥಾನ ನೀಡಲಾಗಿದೆ. ಈ ಹಿಂದೆ ಕರ್ನಾಟದಿಂದ ದಿವಂಗತ ಅನಂತ್‌ ಕುಮಾರ್‌ ಅವರು ಸಂಸದೀಯ ಮಂಡಳಿಯಲ್ಲಿ ಸದಸ್ಯರಾಗಿದ್ದರು.

Share Post