CrimeInternational

ಕಾಬೂಲ್‌ ಪ್ರಾರ್ಥನಾ ಮಂದಿರದಲ್ಲಿ ಸ್ಫೋಟ; 20 ಮಂದಿ ದುರ್ಮರಣ

ಕಾಬೂಲ್; ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌‌ನಲ್ಲಿ ಬಾಂಬ್‌ ದಾಳಿ ನಡೆದಿದ್ದು, ೨೦ ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಪ್ರಾರ್ಥನೆಯ ವೇಳೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಇದುವರೆಗೆ ಯಾವುದೇ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿಲ್ಲ. ಇದೊಂದು ಆತ್ಮಾಹುತಿ ದಾಳಿಯಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದು, ಘಟನೆಯಲ್ಲಿ ಮುಸ್ಲಿಂ ಧರ್ಮಗುರು ಮುಲ್ಲಾ ಅಮೀರ್ ಮೊಹಮ್ಮದ್ ಕಾಬೂಲಿ ಮೃತಪಟ್ಟಿದ್ದಾರೆ. ಅಫ್ಗಾನಿಸ್ತಾನದಲ್ಲಿ ಸಂಪೂರ್ಣ ನಿಯಂತ್ರಣ ಸಾಧಿಸಿದ್ದೇವೆ ಎಂದು ತಾಲಿಬಾನ್ ಹೇಳಿಕೊಳ್ಳುತ್ತಿದೆ. ಇನ್ನೊಂದೆಡೆ ನಾಗರಿಕರನ್ನು ಗುರಿಯಾಗಿಸಿ ಇಸ್ಲಾಮಿಕ್ ಸ್ಟೇಟ್ ನಿರಂತರ ದಾಳಿ ನಡೆಸುತ್ತಲೇ ಇದೆ ಎಂದು ವರದಿಯಾಗಿದೆ. ಎರಡು ವಾರಗಳ ಹಿಂದೆಯಷ್ಟೇ ಕಾಬೂಲ್‌ನಲ್ಲಿ ನಡೆದ ಅವಳಿ ಬಾಂಬ್ ಸ್ಫೋಟದಲ್ಲಿ 10 ಮಂದಿ ಮೃತಪಟ್ಟಿದ್ದರು. ಕಳೆದ ವರ್ಷ ಅಫ್ಗಾನಿಸ್ತಾನದಿಂದ ತನ್ನ ಸೇನೆಯನ್ನು ಅಮೆರಿಕ ಹಿಂತೆಗೆದುಕೊಂಡಿತ್ತು. ಈ ವೇಳೆ ತಾನಿಬಾನ್‌‌ಗಳು ಅಫ್ಗಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಿದ್ದರು.

Share Post