CrimeDistricts

ಸಂಗೊಳ್ಳಿ ರಾಯಣ್ಣ ಫ್ಲೆಕ್ಸ್‌ ಹರಿದ ಕಿಡಿಗೇಡಿಗಳು; ಕೆಲಕಾಲ ಪರಿಸ್ಥಿತಿ ಉದ್ವಿಗ್ನ

ಬೆಳಗಾವಿ; ಕಳೆದ ರಾತ್ರಿ ಗೋಕಾಕ ತಾಲ್ಲೂಕಿನ ಖನಗಾಂವದಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಫ್ಲೆಕ್ಸ್‌ ಹರಿದು ಹಾಕಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಇಂದು ಬೆಳಗ್ಗೆ ಘಟನೆ ಖಂಡಿಸಿ ರಾಯಣ್ಣ ಅಭಿಮಾನಿಗಳು ಪ್ರತಿಭಟಿಸಿದರು. ಮೆರವಣಿಗೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. ಖನಗಾಂವದ ರಾಯಣ್ಣ ವೃತ್ತದಲ್ಲಿ ಈ ಫ್ಲೆಕ್ಸ್‌ ಅಳವಡಿಸಲಾಗಿತ್ತು. ಕಿಡಿಗೇಡಿಗಳು ಇದನ್ನು ಹರಿದುಹಾಕಿ ಆತಂಕಕ್ಕೆ ಕಾರಣವಾದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

Share Post