CrimeNational

ಜಾರ್ಖಂಡ್‌ ಸಿಎಂ ಆಪ್ತನ ಮನೆಯಲ್ಲಿ ಸಿಕ್ಕವು ಎರಡು AK-47 ರೈಫಲ್ಸ್‌

ರಾಂಚಿ;  ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್​​ ಆಪ್ತರು ಎಂದು ಹೇಳಲಾಗ್ತಿರುವ ಉದ್ಯಮಿ ಪ್ರೇಮ್​ ಪ್ರಕಾಶ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ  ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಈ ವೇಳೆ ಅಚ್ಚರಿ ಎಂಬಂತೆ, ಎರಡು ಎಕೆ 47 ರೈಫಲ್ಸ್‌  ಪತ್ತೆಯಾಗಿದ್ದು, ಅವುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಜಾರ್ಖಂಡ್‌ ರಾಜ್ಯದಲ್ಲಿ ನಡೆದಿರುವ 100 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಪ್ರೇಮ್ ಪ್ರಕಾಶ್​ ಮನೆ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಈ ದಾಳಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 20 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಪಕ್ಕದ ರಾಜ್ಯಗಳಾಗಿರುವ ಬಿಹಾರ, ತಮಿಳುನಾಡು ಮತ್ತು ದೆಹಲಿ ಎನ್​​ಸಿಆರ್​​​ನಲ್ಲೂ ಪರಿಶೀಲನೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

Share Post