BengaluruPolitics

ಗುತ್ತಿಗೆದಾರರಿಂದ ಕಮೀಷನ್‌ ಪಡೆದ ಆರೋಪ; ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು; ಗುತ್ತಿಗೆದಾರರಿಂದ ಶೇಕಡಾ 40 ರಷ್ಟು ಕಮಿಷನ್ ಬೇಡಿಕೆಯ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಆಗ್ರಹಕ್ಕೆ ಬೆಲೆ ಕೊಡದೇ ಹೋದರೆ ಈ ವಿಚಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವುದಾಗಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

  ಇಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಭೇಟಿಯ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾದ ನಂತರ ಮೊದಲ ಬಾರಿಗೆ ಇಂದು ಕೆಂಪಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಅವರು ಪ್ರಧಾನಿಗಳಿಗೆ ಬರೆದ ಪತ್ರವನ್ನೂ ನೋಡಿದೆ ಎಂದರು.

ಸರ್ಕಾರ ಏಪ್ರಿಲ್‌ ತಿಂಗಳಿನಲ್ಲಿ ಗುತ್ತಿಗೆದಾರರನ್ನು ಮಾತುಕತೆಗೆ ಕರೆದಿತ್ತು. ಸಮಸ್ಯೆ ಬಗೆಹರಿಸುವ ಭರವಸೆ ನೀಡಿ ಇಷ್ಟು ಸಮಯವಾದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಚಾರವನ್ನು ತಾವು ವಿಧಾನಸಭೆಯಲ್ಲಿ ಒತ್ತಾಯಿಸಬೇಕು ಎಂದು ನನಗೆ ಮನವಿ ಮಾಡಿದ್ದಾರೆ. ಟೆಂಡರ್‌ ಅನುಮೋದನೆಗೆ ಮೊದಲೇ ಶೇ.30ರಿಂದ 40ರಷ್ಟು ಲಂಚ ಕೊಡಬೇಕಾಗಿದೆ. ಪ್ರಧಾನಿಗಳಿಗೆ ಪತ್ರ ಬರೆದು ಒಂದು ವರ್ಷವಾದರೂ ಅವರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

Share Post