CrimeNational

ಕಷ್ಟಪಟ್ಟು ಸಂಪಾದಿಸಿದ ಹಣ ವಶಪಡಿಸಿಕೊಂಡಿದ್ದಾರೆ; ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌

ನವದೆಹಲಿ; ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ತನಿಖೆಗೆ ಒಳಗಾಗಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ತಮ್ಮದು ಕಷ್ಟಪಟ್ಟು ಸಂಪಾದಿಸಿದ ಹಣ ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯದ ತನಿಖೆ ಬಳಿಕ ಜಾಕ್ವೆಲಿನ್ ಅವರ ಠೇವಣಿ ಖಾತೆಗಳನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 200 ಕೋಟಿ ರೂಪಾಯಿ ಅಕ್ರಮ ಹಣಕಾಸು ವ್ಯವಹಾರದಲ್ಲಿ ಸುಕೇಶ್ ಚಂದ್ರಶೇಖರ್ ವಂಚನೆ ಮಾಡಿರುವ ಪ್ರಕರಣದಲ್ಲಿ ಜಾಕ್ವೆಲಿನ್ ಕೂಡ ಆರೋಪಿಯಾಗಿದ್ದಾರೆ. ಸುಕೇಶ್‌ ಚಂದ್ರಶೇಖರ್‌ ಜಾಕ್ವೆಲಿನ್‌ಗೆ ಉಡುಗೊರೆ ರೂಪದಲ್ಲಿ 10 ಕೋಟಿ ರೂಪಾಯಿ ನೀಡಿರುವುದನ್ನು ಇ.ಡಿ ಅಧಿಕಾರಿಗಳು ಬಯಲಿಗೆಳೆದಿದ್ದರು.

ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿರುವುದು ನಾನು ಕಷ್ಟಪಟ್ಟು ಸಂಪಾದನೆ ಮಾಡಿರುವ ಹಣ. ಸುಕೇಶ್ ಜತೆ ಗೆಳೆತನ ಬೆಳೆಸುವುದಕ್ಕೂ ಮೊದಲೇ ನಾನು ದುಡಿದಿದ್ದ ಹಣವದು. ಅದನ್ನು ಬ್ಯಾಂಕ್‌ನಲ್ಲಿ ಠೇವಣಿ ಇರಿಸಿದ್ದೆ. ಆದರೆ ಈಗ ವಂಚನೆ ಪ್ರಕರಣದಲ್ಲಿ ನನ್ನ ಹೆಸರು ಇರುವುದರಿಂದ, ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಾಕ್ವೆಲಿನ್ ಹೇಳಿದ್ದಾರೆ.

Share Post