ಕಾಂಗ್ರೆಸ್ನಿಂದ ಹೊರಬಂದ ಹಿರಿಯ ನಾಯಕ ಗುಲಾಂ ನಬಿ ಆಜಾದ್
ನವದೆಹಲಿ; ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಇಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಅವರಿಗೆ ನೀಡಿದ್ದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅವರು ಕಾಂಗ್ರೆಸ್ನಿಂದ ಹೊರಬಂದಿದ್ದಾರೆ. ದಶಕಗಳಿಂದ ಕಾಂಗ್ರೆಸ್ನಲ್ಲಿದ್ದ ಗುಲಾಂ ನಬಿ ಆಜಾದ್, ಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದರು.
ಗುಲಾಂ ನಬಿ ಆಜಾದ್ ಅವರು ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ಹಾಗೂ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ವ್ಯವಹಾರಗಳ ಸಮಿತಿಗೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ನ ನಾಯಕತ್ವ ಬದಲಾವಣೆ ಸೇರಿದಂತೆ ಪಕ್ಷದ ಆಮೂಲಾಗ್ರ ಬದಲಾವಣೆಗೆ ಆಗ್ರಹಿಸಿದ್ದ 23 ಮಂದಿ ಬಂಡಾಯ ನಾಯಕರಲ್ಲಿ ಆಜಾದ್ ಸಹ ಒಬ್ಬರು.