Districts

ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲ; ಗ್ರಾಪಂ ಕಚೇರಿ ಎದುರೇ ಶವ ಸಂಸ್ಕಾರ

ಚಾಮರಾಜನಗರ; ಮಳೆಯಿಂದಾಗಿ ಸ್ಮಶಾನಕ್ಕೆ ತೆರಳಲು ರಸ್ತೆ ಇಲ್ಲದಂತಾಗಿದ್ದು, ಇದರಿಂದ ಆಕ್ರೋಶಗೊಂಡ ಜನರು ಗ್ರಾಮ ಪಂಚಾಯತ್‌ ಕಚೇರಿ ಎದುರೇ ಶವಸಂಸ್ಕಾರ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಚಂದ್ರ ಮ್ಮ ಎಂಬುವವರು ಮೃತಪಟ್ಟಿದ್ದು, ಅವರ ಪಾರ್ಥಿವ ಶರೀರನ್ನು ಗ್ರಾಂ ಕಚೇರಿ ಎದುರು ಸಂಸ್ಕಾರ ಮಾಡಲಾಗಿದೆ.

   ಮಾಂಬಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ಕಾಲುವೆಯನ್ನು ದಾಟಿ ಹೋಗಬೇಕಿದೆ. ಆದ್ರೆ ಕೆಲ ದಿನಗಳಿಂದ ವಿಪರೀತ ಮಳೆ ಸುರಿಯುತ್ತಿದೆ. ಹೀಗಾಗಿ ಸುವರ್ಣಾವತಿ ಜಲಾಶಯದ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಸ್ಮಶಾನಕ್ಕೆ ತೆರಳಲು ಆಗುತ್ತಿಲ್ಲ. ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಹಲವು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ. ಆದ್ರೂ ಯಾರೂ ಇತ್ತ ಗಮನ ಹರಿಸಿಲ್ಲ. ಇದ್ರಿಂದ ಆಕ್ರೋಶಗೊಂಡ ಗ್ರಾಮಸ್ಥರು, ಗ್ರಾಪಂ ಕಚೇರಿ ಆವರಣದಲ್ಲೇ ಶವಸಂಸ್ಕಾರ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಎಸಿ ಗೀತಾ ಹುಡೇದ, ಡಿವೈಎಸ್ಪಿ ಭೇಟಿ ಕೊಟ್ಟಿದ್ದಾರೆ.

Share Post