CrimeDistricts

ಮುರುಘಾ ಶ್ರೀಗಳ ಬಂಧನ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿಲ್ಲ; ವಿ.ಸೋಮಣ್ಣ

ಚಾಮರಾಜನಗರ; ಇಬ್ಬರು ವಿದ್ಯಾರ್ಥಿನಿಯರ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆ ದಾಖಲಾಗಿದೆ. ಆದ್ರೆ ಅವರ ಬಂಧನದ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಸೋಮಣ್ಣ ಅವರು ಈ ರೀತಿ ಉತ್ತರ ನೀಡಿದರು.

ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಏನಾಗಿದೆ ಎಂಬುದರ ಕುರಿತು ನನಗೆ ಸಂಪೂರ್ಣ ಮಾಹಿತಿ ಇದೆ. ಈ ರೀತಿಯ ಪ್ರಕರಣ ನಡೆದಿರುವುದು ದುರಂತ. ಪ್ರಕರಣದ ಸತ್ಯಾಸತ್ಯತೆ ಹೊರಬರಲು ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೂಡಾ ಪೊಲೀಸರಿಗೆ ತನಿಖೆ ನಡೆಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದಿದ್ದಾರೆ. ಈಗಾಗಲೇ ನ್ಯಾಯಾಲಯದಲ್ಲಿ ಬಾಲಕಿಯರು ಹೇಳಿಕೆ ನೀಡಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿರುವಾಗ ನಾನು ಈ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ ಸೋಮಣ್ಣ ಹೇಳಿದ್ದಾರೆ.

Share Post