CrimeDistricts

ಪ್ರೇಮಸಾಯಿ ಹೆಸರಿನಲ್ಲಿ ವಂಚನೆ; ಚನ್ನಪಟ್ಟಣ ಠಾಣೆಯಲ್ಲಿ ದೂರು ದಾಖಲು

ರಾಮನಗರ; ಪ್ರೇಮಸಾಯಿ ಎಂದು ಹೇಳಿಕೊಂಡು ನಾನು ದೇವಮಾನವ,  ಜನರ ಕಷ್ಟಗಳನ್ನು ದೂರ ಮಾಡುತ್ತೇನೆ ಎಂದು ಸಾರ್ವಜನಿಕರಿಗೆ ವಂಚಿಸುತ್ತಿದ್ದ ತಂಡದ ವಿರುದ್ಧ ಚನ್ನಪಟ್ಟಣ ನಗರ ಪೂರ್ವ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಕೊಲ್ಲಾಪುರದಿಂದ ಬಂದಿದ್ದ ತಂಡವೊಂದು ಪ್ರೇಮ ಸಾಯಿಬಾಬಾ ಎಂದು ಹೇಳಿಕೊಂಡು ವಂಚಿಸಿರುವ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದ್ದರು. ಆರೋಪಿಗಳು ನಾಪತ್ತೆಯಾಗಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಗರದ ಎಂ.ಜಿ. ರಸ್ತೆಯ ಯಶೋದಮ್ಮ ಎಂಬುವರ ಮನೆಯಲ್ಲಿ 8 ತಿಂಗಳಿಂದ ಸಚಿನ್​ ಅಕಾರಾಂ ಸರ್​ಗರ್​ ಎಂಬಾತ ಜನರ ಸಮಸ್ಯೆ ಪರಿಹರಿಸುತ್ತೇನೆ ಎಂದು ನಿತ್ಯ ಬೆಳಗ್ಗೆ ಮತ್ತು ಸಂಜೆ ಪೂಜಾ ಕಾರ್ಯಗಳನ್ನು ಕೈಗೊಳ್ಳುತ್ತಿದ್ದನು. ಈ ಬಗ್ಗೆ ತಿಳಿದ ಹಲವರು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

Share Post