ಪೋಕ್ಸೋ ಪ್ರಕರಣ; ಮುರುಘಾ ಶ್ರೀಗಳ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ
ಚಿತ್ರದುರ್ಗ; ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಚಿತ್ರದುರ್ಗ ೨ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ನಾಳೆಗೆ ಮುಂದೂಡಿದೆ. ಜೊತೆಗೆ ಪ್ರಕರಣದ ಮೂರು, ನಾಲ್ಕು ಹಾಗೂ ಐದನೇ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡಾ ನಾಳೆಗೆ ಮುಂದೂಡಲಾಗಿದೆ.
ಸದ್ಯ ೯ ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ತಲೆಮರೆಸಿಕೊಂಡಿರುವ ಇತರ ಮೂವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಮಧ್ಯಾಹ್ನ ವಿಚಾರಣೆ ನಡೆಸಿದ ಕೋರ್ಟ್, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ಪರ ವಕೀಲರಿಗೆ ಸೂಚನೆ ನೀಡಿತು. ಅಲ್ಲದೆ ವಿಚಾರಣೆಯನ್ನು ನಾಳೆ ಬೆಳಗ್ಗೆ ೧೧.೩೦ಕ್ಕೆ ಮುಂದೂಡಿತು.