Districts

ಉಮೇಶ್‌ ಕತ್ತಿ ರಾಜಕೀಯ ಜೀವನ ಪುಸ್ತಕವಾಗಬೇಕು; ಅರುಣ್‌ ಸಿಂಗ್‌

ಚಿಕ್ಕೋಡಿ; ಉಮೇಶ್ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು. ಉಮೇಶ್‌ ಕತ್ತಿ ನಿಧನದ ಹಿನ್ನೆಲೆಯಲ್ಲಿ ಇಂದು ಬೆಲ್ಲದ ಬಾಗೇವಾಡಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಅರುಣ್‌ ಸಿಂಗ್‌ ಅವರು ಕತ್ತಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಸಚಿವ ಉಮೇಶ್ ಕತ್ತಿ ನನ್ನ ವೈಯಕ್ತಿಕ ಮಿತ್ರ. ಬೆಳಗಾವಿ, ಬೆಂಗಳೂರು, ದೆಹಲಿಯಲ್ಲಿ ಅನೇಕ  ಸಲ ಅವರೊಂದಿಗೆ ಕುಳಿತು ಮಾತನಾಡಿದ್ದೇವೆ. ರಾಜ್ಯದ ಅಭಿವೃದ್ಧಿ, ಪಕ್ಷ ಕಟ್ಟುವ ಬಗ್ಗೆ ಅನೇಕ ಸಲಹೆ ನೀಡುತ್ತಿದ್ದರು. ಉಮೇಶ್ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು. ಅವರ ಅಗಲಿಕೆಯಿಂದಾಗಿ ಪಕ್ಷ ಹಾಗೂ ರಾಜ್ಯಕ್ಕೆ ನಷ್ಟ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Share Post