Bengaluru

ಜನಸ್ಪಂದನ ಕಾರ್ಯಕ್ರಮಕ್ಕೆ ಸ್ಮೃತಿ ಇರಾನಿ ಬರ್ತಾರೆ, ನಡ್ಡಾ ಬರೋದು ಸಂಜೆ ಗೊತ್ತಾಗುತ್ತೆ; ಸಿಎಂ

ಬೆಂಗಳೂರು; ನಾಳೆ ದೊಡ್ಡ ಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕಾರ್ಯಕ್ರಮಕ್ಕೆ ಬರುತ್ತಾರೆ ಎಂದು ಹೇಳಲಾಗಿತ್ತು. ಮೊದಲ ಬಾರಿಗೆ ಕಾರ್ಯಕ್ರಮ ಆಯೋಜನೆಯಾಗಿದ್ದಾಗ ನಡ್ಡಾ ಅವರು ಬರುವುದಿತ್ತು. ಆದ್ರೆ ಕಾರ್ಯಕ್ರಮ ಎರಡು ಬಾರಿ ಮುಂದೂಡಿಕೆಯಾಗಿದೆ. ಈಗ ಮೂರನೇ ಬಾರಿ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ನಡ್ಡಾ ಬರುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ಜೆಪಿ ನಡ್ಡಾ ಅವರು ಬರುತ್ತಾರಾ, ಇಲ್ಲವಾ ಅನ್ನೋದು ಸಂಜೆ ವೇಳೆಗೆ ಗೊತ್ತಾಗಲಿದೆ ಎಂದು ಹೇಳಿದರು.

Share Post