ಮೈಸೂರು; ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇಂಗ್ಲೆಂಡ್ ರಾಣಿ ಎರಡನೇ ಎಲಿಜಬೆತ್ ನಿನ್ನೆ ರಾತ್ರಿ ಅರಮನೆಯಲ್ಲಿ ನಿಧನರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಎಲಿಜಬೆತ್ ಅವರು ಬೆಂಗಳೂರಿಗೆ ಬಂದಿದ್ದ ಹಳೆಯ ವಿಡಿಯೋವನ್ನು ಹಂಚಿ ಸಂತಾಪ ಸೂಚಿಸಿದ್ದಾರೆ.
1950 ದಶಕದಲ್ಲಿ ರಾಣಿ ಎರಡನೇ ಎಲಿಜಬೆತ್ ಅವರು ಬೆಂಗಳೂರಿಗೆ ಭೇಟಿಕೊಟ್ಟಿದ್ದರು. ಅಂದಿನ ರಾಜ್ಯಪಾಲರು ಹಾಗೂ ಮಾಜಿ ಮಹರಾಜ ಜಯಚಾಮರಾಜೇಂದ್ರ ಒಡೆಯರ್ ಅವರನ್ನು ಭೇಟಿಯಾಗಿದ್ದರು. ಅಂದಿನ ಕ್ಷಣಗಳನ್ನು ಯದುವೀರ್ ಒಡೆಯರ್ ನೆನಪಿಸಿಕೊಂಡಿದ್ದಾರೆ. ಅದರ ವಿಡಿಯೋವನ್ನು ಕೂಡಾ ಹಂಚಿಕೊಂಡಿದ್ದಾರೆ.
ಇನ್ನು ಬ್ರಿಟನ್ ರಾಣಿ 2ನೇ ಎಲಿಜಬೆತ್ ನಿಧನದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ರಾಣಿ ಎಲಿಜಬೆತ್ ನಿಧನದ ಹಿನ್ನೆಲೆಯಲ್ಲಿ ಸೆ.11ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
Post Views: 352