CrimeNational

ಸಕ್ಕರೆದಾರ್​ ಸೇತುವೆ ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

ನಾಗ್ಪುರ್​; ಮಹಾರಾಷ್ಟ್ರದ ನಾಗ್ಪುರದ ಸಕ್ಕರೆದಾರ್​ ಸೇತುವೆ ಬಳಿ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದ್ದು, ಪೊಲೀಸರು ಕಾರು ಚಾಲಕನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ನಾಗ್ಪುರ್​ದ ಸಕ್ಕರೆದಾರ್​ ಸೇತುವೆ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಕಾರ್​​ವೊಂದು ಬೈಕ್​​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​ ಸವಾರ, ಅವರ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಬೈಕ್​ಗೆ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಎಲ್ಲರೂ ಸೇತುವೆ ಮೇಲಿಂದ ಕಳೆಗೆ ಹಾರಿ ಬಿದ್ದಿದ್ದಾರೆ.

ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಸೇತುವೆ ಮೇಲೆ ಜನಸಂದಣಿ ಇಲ್ಲದ ಕಾರಣ ಕಾರು ಚಾಲಕ ಗಣೇಶ್ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಈ ವೇಳೆ, ಒಂದರ ಹಿಂದೆ ಒಂದರಂತೆ ಒಟ್ಟು ಮೂರು ಬೈಕ್​​ಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​​ ಮೇಲೆ ತೆರಳುತ್ತಿದ್ದ ಸವಾರ, ಅವರ ಇಬ್ಬರು ಮಕ್ಕಳು ಹಾಗೂ ತಾಯಿ ಅಸುನೀಗಿದ್ದಾರೆ. ಉಳಿದಂತೆ ಬೇರೆ ಬೈಕ್​ ಸವಾರರಿಗೆ ಗಾಯವಾಗಿದೆ.

Share Post