Bengaluru

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು; ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.  37.08% ರಷ್ಟು ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

ಆ.12ರಿಂದ ಆ.25ರವರೆಗೆ ನಡೆದಿದ್ದ ಪೂರಕ ಪರೀಕ್ಷೆ ನಡೆಸಲಾಗಿತ್ತು. 1,85,415 ವಿದ್ಯಾರ್ಥಿಗಳು ಪರೀಕ್ಷೆಗೆ ಕಟ್ಟಿದ್ದು, ಒಟ್ಟು 1,75,905 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 65,233 ವಿದ್ಯಾರ್ಥಿಗಳು ಮಾತ್ರ ಪಾಸ್‌ ಆಗಿದ್ದಾರೆ.

   ಪೂರಕ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು karresults.nic.in ನಲ್ಲಿ Karresults ನ ಅಧಿಕೃತ ಸೈಟ್ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.
Share Post