CrimeDistricts

ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ; ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಲಾಗಿದೆ. ಇತರ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನೂ ನಾಳೆಗೆ ಮುಂದೂಡಲಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಎರಡನೇ ಆರೋಪಿಯಾಗಿರುವ ಹಾಸ್ಟೆಲ್‌ ವಾರ್ಡನ್‌ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಕೂಡಾ ನಾಳೆಯೇ ನಡೆಯಲಿದೆ. ಇನ್ನು ಪ್ರಕರಣದ ಮೂರನೇ ಆರೋಪಿ 17 ವರ್ಷದ ಬಾಲಕ, ನಾಲ್ಕನೇ ಆರೋಪಿ ಪರಮಶಿವಯ್ಯ ಹಾಗೂ ಐದನೇ ಆರೋಪಿ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಕೂಡಾ ಮುಂದೂಡಲಾಗಿದೆ.

Share Post