BengaluruPolitics

ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಸಾಂಗ್‌; ರಿಲೀಸ್‌ ಮಾಡಿದ ಕಾಂಗ್ರೆಸ್‌

ಬೆಂಗಳೂರು; ಕರ್ನಾಟಕ ಈಗ ಕರಪ್ಶನ್ ಕ್ಯಾಪಿಟಲ್ ಆಫ್‌‌ ಇಂಡಿಯಾ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಪಾದಿಸಿದ್ದಾರೆ. ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಬಲ್‌ ಎಂಜಿನ್ ಸರ್ಕಾರ ಬಂದ ಮೇಲೆ ಬೊಮ್ಮಾಯಿ ಸರ್ಕಾರದ ರೇಟ್ ಕಾರ್ಡ್ ಹಾಕಿ ಯಾವುದಕ್ಕೆ ಎಷ್ಟೆಷ್ಟು ರೇಟ್ ಅಂತ ಹಾಕಿದೆ. ಮೂವತ್ತು ಪರ್ಸೆಂಟ್‌ ಟ್ಯಾಕ್ಸ್ ಕಟ್ಟುವುದು ಬೆಂಗಳೂರಿನಿಂದ. ಸಬ್ ಅರ್ಬನ್ ರೈಲಿನ ದೊಡ್ಡ ಘೋಷಣೆ ಮಾಡಿದಿರಿ ಈಗ ಅದು ಏನಾಗಿದೆ ಎಂದರು. ಬರೀ ಭೂಮಿ ಪೂಜೆಯಲ್ಲೇ ಉಳಿದುಕೊಂಡಿದೆ ಹೊರತು ಡಬಲ್ ಇಂಜಿನ್ ಸರ್ಕಾರಕ್ಕೆ ಕೆಲಸ ಮಾಡಕ್ಕಾಗ್ತಿಲ್ಲ ಎಂದು ಗುಡುಗಿದರು.

ಯಾವುದಾದರೂ ರಾಷ್ಟ್ರೀಯ ಯೋಜನೆ ಮಾಡಿದ್ದೀರಾ? ನೀರಾವರಿ ಯೋಜನೆ ಮಾಡಿದ್ದೀರಾ..? ಎಂದು ಪ್ರಶ್ನಿಸಿದ ಡಿಕೆಶಿ, ಎಲ್ಲದಕ್ಕೂ ಎಲ್ಲ ಹುದ್ದೆಗೂ ಒಂದೊಂದು ರೇಟ್ ಫಿಕ್ಸ್ ಆಗಿಬಿಟ್ಟಿದೆ. ಪ್ರತಿದಿನ ನಾವು ನಿಮಗೆ ಕೇಳ್ತಿದ್ದೇವೆ ಉತ್ತರ ಇದೆಯಾ ಅಂತ. ನೀವು ನುಡಿದಂತೆ ನಡೆಯೋದಕ್ಕೆ ಆಗ್ತಿಲ್ಲ. ನಮ್ಮ ಪ್ರಶ್ನೆಗಳಿಗೆ ಒಂದಕ್ಕೂ ನಿಮ್ಮತ್ರ ಉತ್ತರ ಇಲ್ಲ ಎಂದರು.

40% ಸರ್ಕಾರ. ಬಿಜೆಪಿ ಅಂದ್ರೆ ಭ್ರಷ್ಟಾಚಾರ ಎಂದು ಕಾಂಗ್ರೆಸ್‌ ಬಿಜೆಪಿ ವಿರುದ್ಧ ಅಭಿಯಾನ ಶುರು ಮಾಡಿದೆ. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಜಂಟಿ ಪ್ರೆಸ್ ಮೀಟ್​ನಲ್ಲಿ ವಿಶೇಷ ಅಭಿಯಾನಕ್ಕೆ ಕಾಂಗ್ರೆಸ್ ಚಾಲನೆ ನೀಡಲಾಯಿತು. ಭ್ರಷ್ಟಾಚಾರ ಭ್ರಷ್ಟಾಚಾರ.. ಕಮಿಷನ್ನೇ ಬಿಜೆಪಿಗೆ ಆಹಾರ.. ಸಾಂಗ್ ರಿಲೀಸ್ ಮಾಡಲಾಯಿತು. ಬ್ಯಾನರ್​ನಲ್ಲಿ 200 ರೂ. ನೋಟ್ ಪ್ರಿಂಟ್ ಮಾಡಿದ ಕಾಂಗ್ರೆಸ್, 200 ರೂ. ನೋಟಿನಲ್ಲಿ ಭ್ರಷ್ಟ ಜನತಾ ಪಕ್ಷ ಅಂದ್ರೆ ಭ್ರಷ್ಟಾಚಾರ, 40% ಕಮಿಷನ್ ಸರ್ಕಾರ, ಹೆಚ್ಚಿನ ಮಾಹಿತಿಗಾಗಿ 8447704040 ಈ ನಂಬರ್​ಗೆ ಕರೆ ಮಾಡಿ ಎಂದು ಹೆಲ್ಪ್ ಲೈನ್ ಸಂಖ್ಯೆ ಮುದ್ರಣ ಮಾಡಲಾಗಿದೆ.

Share Post