BengaluruPolitics

ಮಾಜಿ ಶಾಸಕ ಮಧುಬಂಗಾರಪ್ಪ ಕೆಪಿಸಿಸಿ ಹಿಂದುಳಿದ ವರ್ಗಗಳ ಕಾರ್ಯಾಧ್ಯಕ್ಷರಾಗಿ ನೇಮಕ

ಬೆಂಗಳೂರು; ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರ ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಎಐಸಿಸಿ ಈ ನೇಮಕದ ಆದೇಶ ಹೊರಡಿಸಿದೆ.

ಎಐಸಿಸಿಯ ಒಬಿಸಿ ಘಟಕದ ಅಧ್ಯಕ್ಷ ಕ್ಯಾಫ್ಟನ್ ಅಜಯ್ ಸಿಂಗ್ ಯಾದವ್ ಅವರು ಈ ನೇಮಕದ ಆದೇಶ ನೀಡಿದ್ದಾರೆ. ಸೊರಬ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಧು ಬಂಗಾರಪ್ಪ ಗೆದ್ದಿದ್ದರು. ಅನಂತರ ಅವರು 2021ರಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ಸೇರಿದ ನಂತರ ಅವರು ರಾಜ್ಯಾದ್ಯಂತ ಸುತ್ತಾಡಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

Share Post